ಕುಮಟಾ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂಸದ ಅನಂತಕುಮಾರ ಹೆಗಡೆ ಅವರು ಇತ್ತೀಚೆಗೆ ಬಿ.ಜೆ.ಪಿ ಮುಖಂಡರು ಮತ್ತು ಕಾರ್ಯಕರ್ತರನ್ನುದ್ದೇಶಿಸಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಮಾತನಾಡಿದ ಹಿನ್ನೆಲೆಯಲ್ಲಿ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ವರದಿ ಮಾಡಿದ ಪತ್ರಕರ್ತರಿಗೆ ತನಿಖೆ ಸಮಯದಲ್ಲಿ ಹಾಜರಿದ್ದು ಮಾಹಿತಿ ನೀಡುವಂತೆ ಕುಮಟಾ ಪರ್ತಕರ್ತರಿಗೆ ಪೊಲೀಸ್
ನೋಟಿಸ್ ನೀಡಲಾಗಿದೆ. ಸಂಸದ ಅನಂತಕುಮಾರ ಹೆಗಡೆ ಅವರು ಪ್ರವಾಸಿ ಮಂದಿರದಲ್ಲಿ ಹಿಂದೂ ಹಾಗೂ ಮುಸ್ಲಿಂ ಧರ್ಮದವರ ಕೋಮು ಸೌಹಾರ್ದತೆಗೆ ಧಕ್ಕೆ ಮಾಡುವ ಮತ್ತು ಧರ್ಮ-ಧರ್ಮಗಳ ನಡುವೆ,
ವಿವಿಧ ಗುಂಪುಗಳ ನಡುವೆ ದ್ವೇಷವನ್ನುಂಟು ಮಾಡುವ ಹಾಗೂ ಸೌಹಾರ್ದತೆಗೆ ಬಾಧಕವಾಗುವ ಹಾಗೆ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಕುಮಟಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಜ.24ರಂದು ಕುಮಟಾ ಠಾಣೆಯಲ್ಲಿ ನಡೆಯಲಿರುವ ತನಿಖೆ ಸಮಯದಲ್ಲಿ ಸೂಕ್ತ ದಾಖಲೆಯೊಂದಿಗೆ ಹಾಜರಿದ್ದು ಸಹಕರಿಸುವಂತೆ ಕುಮಟಾ ಪೊಲೀಸ್ನಿ ರೀಕ್ಷಕ ತಿಮ್ಮಪ್ಪ ನಾಯ್ಕ ನೋಟಿಸ್ ನಲ್ಲಿ ತಿಳಿಸಿದ್ದಾರೆ.