ಬಂಗಾರಮಕ್ಕಿ ಕ್ಷೇತ್ರದಿಂದ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಬಹು ವರ್ಷಗಳ ಕೂಗು ಜಿಲ್ಲೆಗೊಂದು ಸೂಪರ್ ಮಲ್ಟಿಸ್ಪೆಷಾಲಿಟಿ
ಅಸ್ಪತ್ರೆ. ಈ ಕೂಗಿಗೆ ಇಂದು ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ
ಸಭಾಭವನದಲ್ಲಿ ನಡೆದ ಸಂಸ್ಕೃತಿ ಕುಂಭ ಮಲೆನಾಡ ಉತ್ಸವದಲ್ಲಿ ಶುಭ ಸಿಂಚನವಾಗಿದೆ.
ಬಂಗಾರಮಕ್ಕಿ ಕ್ಷೇತ್ರ ಮತ್ತು ಸುದೀಕ್ಷ ಗ್ರೂಪ್ ಆಪ್ ಕಂಪನಿಸ್ ಸಹಯೋಗದಲ್ಲಿ ಸೂಪರ್
ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು ಎಂದು ಮಲೆನಾಡು ಉತ್ಸವ ಉದ್ಘಾಟನಾ
ಕಾರ್ಯಕ್ರಮಲ್ಲಿ ಘೋಷಿಸಲಾಗಿದೆ.


ಕಾರ್ಯಕ್ರಮ ಉದ್ಘಾಟಿಸಿದ ಸುದೀಕ್ಷ ಗ್ರೂಪ್ ಆಫ್ ಕಂಪನಿಸ್ ನ ಸಿ.ಎಂ.ಡಿ. ಡಾ. ಸುಬ್ರಹ್ಮಣ್ಯ ಶರ್ಮ
ಗೌರವರಂ ಅವರು ‘ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಉನ್ನತ ದರ್ಜೆಯ ಆಸ್ಪತ್ರೆಯಿಲ್ಲದೇ ನೂರಾರು
ಜೀವಗಳು ಆತಂಕದಿoದ ಇದ್ದು ಇನ್ನೂ ಉತ್ತರ ಸಿಗುತ್ತಿಲ್ಲ. ಜನರ ಕೂಗಿಗೆ ಬೆಲೆಯೇ ಇಲ್ಲವಾಗಿದೆ’
ಎಂದು ಕ್ಷೇತ್ರದ ಶ್ರೀ ಮಾರುತಿ ಗುರೂಜಿ ಅವರು ನನ್ನ ಬಳಿ ನೋವಿನಿಂದ ಹೇಳಿಕೊಂಡು ‘ಜಿಲ್ಲೆಗೊಂದು
ದಾರಿ ತೋರಿಸಿ’ ಎಂದು ಹೇಳುತ್ತಿದ್ದರು. ಅವರ ನಿಷ್ಕಲ್ಮಶ ಧ್ವನಿಗೆ ಬೆಲೆ ಕೊಟ್ಟು ನನ್ನ ಸಂಸ್ಥೆ ಮತ್ತು ಶ್ರೀ
ಕ್ಷೇತ್ರದ ಸಹಯೋಗದೊಂದಿಗೆ ಈ ಜಿಲ್ಲೆಗೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ
ಒದಗಿಸಿಕೊಡಲಾಗುವುದು. ಈಗಾಗಲೇ ಈ ಬಗ್ಗೆ ಸಿದ್ಧತೆಯ ಪ್ರಕ್ರಿಯೆಗಳು ನಡೆದಿವೆ. ಅತಿ ಶ್ರೀಘ್ರವಾಗಿ
ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಜಿಲ್ಲೆಯ ಜನರಿಗೆ ಲಭ್ಯವಾಗಲಿದೆ. ಇದರೊಟ್ಟಿಗೆ ಅತ್ಯುತ್ತಮ
ವ್ಯವಸ್ಥೆಯ ಇಂಜಿನಿಯರಿಂಗ್ ಕಾಲೇಜನ್ನೂ ಕೂಡ ಆರಂಭಿಸಲಾಗುವುದು ಎಂದು ಘೋಷಿಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬೆಂಗಳೂರಿನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಮೆಡಿಕಲ್
ಡೈರೆಕ್ಟರ್ ಡಾ. ಚೇತನ್ ಆರ್. ಅವರು ವೇದಿಕೆಯಲ್ಲಿ ಪ್ರಸ್ತಾಪಿತ ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ
ಯೋಜನೆಗೆ ತಮ್ಮ ಆಸ್ಪತ್ರೆಯಿಂದ ಎಲ್ಲ ರೀತಿಯ ಸಹಕಾರ ಕೊಡಲಾಗುವುದು ಮತ್ತು ಕ್ಷೇತ್ರದಿಂದ
ಸಿಬಿಎಸ್‌ಸಿ ಪಠ್ಯಕ್ರಮದಡಿ ನಡೆಸುತ್ತಿರುವ ಪಿಯುಸಿ ದ್ವಿತೀಯ ವರ್ಷದಲ್ಲಿ ಪ್ರಥಮ ಸ್ಥಾನ ಪಡೆದ
ವಿದ್ಯಾರ್ಥಿಗೆ ಚಿನ್ನದ ಪದಕ ನೀಡಲಾಗುವುದು ಎಂದು ಹೇಳಿದರು.
ಇನ್ನೋರ್ವ ಮುಖ್ಯ ಅತಿಥಿ ಉ.ಕ. ಜಿಲ್ಲಾ ಕ.ಸಾ.ಪ. ಮಾಜಿ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಮಾತನಾಡಿ
ಜಿಲ್ಲೆಗೆ ಉನ್ನತ ದರ್ಜೆಯ ಆಸ್ಪತ್ರೆಗಾಗಿ ಜನ ಹಲವಾರು ವರ್ಷಗಳಿಂದ ಸರಕಾರಕ್ಕೆ ಮನವಿ
ಮಾಡುತ್ತಲೇ ಬಂದಿದ್ದಾರೆ. ಆದರೆ ಇದು ರಾಜಕೀಯ ತಿರುವು ಪಡೆದುಕೊಂಡು ಚುನಾವಣಾ ಸಮಯದ
ಸರಕಾಯಿತು. ಆದರೆ ಇಂದು ಡಾ. ಸುಬ್ರಹ್ಮಣ್ಯಂ ಅವರು ಜಿಲ್ಲೆಗೊಂದು ಸೂಪರ್ ಮಲ್ಟಿಸ್ಪೆಷಾಲಿಟಿ
ಆಸ್ಪತ್ರೆ ಮಾಡಿಕೊಟ್ಟರೆ ಉತ್ತರ ಕನ್ನಡ ಜಿಲ್ಲೆ ಅವರಿಗೆ ಶರಣಾಗಿರುತ್ತದೆ ಎಂದರು.

ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಮಾರುತಿ ಗುರೂಜಿ ಅವರು ‘ಉತ್ತರ ಕಾಣದ ಜಲ್ಲೆ’ ಎಂದು
ವಿಡಂಬನಾತ್ಮಕವಾಗಿ ಕರೆಯಲ್ಪಡುವ ಈ ಜಿಲ್ಲೆಗೆ ಅತಿ ಸನಿಹದಲ್ಲೇ ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ
ಮತ್ತು ಉತ್ತಮ ದರ್ಜೆಯ ಇಂಜಿನಿಯರಿಂಗ್ ಕಾಲೇಜು ಬರುತ್ತಿರುವುದು ನಮಗೆ ಸಂತಸವಾಗಿದೆ.
ಇದರೊಟ್ಟಿಗೆ ದಿವ್ಯಾಂಗರ ವಿಶ್ವವಿದ್ಯಾಲಯ ಕೂಡ ಕ್ಷೇತ್ರದ ವತಿಯಿಂದ ಆಗಲಿದೆ. ಇದು ದೇಶ
ಮಾತ್ರವಲ್ಲ, ಜಾಗತಿಕವಾಗಿಯೂ ವಿಶಿಷ್ಟವಾಗಲಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರದ ಆಡಳಿತಾಧಿಕಾರಿ ಎಂ.ಎನ್.ಮoಜುನಾಥ್ ಕ್ಷೇತ್ರ ಯಾವತ್ತೂ
ಜನಪರವಾಗಿ ಸ್ಪಂದಿಸುತ್ತದೆ. ಇದಕ್ಕೆ ಬಲವಾಗಿ ಡಾ. ಸುಬ್ರಹ್ಮಣ್ಯ ಅವರು ಕ್ಷೇತ್ರದ ಅಭಿಲಾಷೆಗೆ
ಬೆನ್ನೆಲುಬಾದದ್ದು ಜಿಲ್ಲೆಯ ಅದೃಷ್ಟ ಎಂದರು.
ಗಣಪತಿ ಹೆಗಡೆ ಸ್ವಾಗತಿಸಿದರು. ದಯಾನಂದ ನಾಯ್ಕ ವಂದಿಸಿದರು.

Leave a Reply

Your email address will not be published. Required fields are marked *